ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕಾಸರಗೋಡು ಜಿಲ್ಲೆಯಲ್ಲಿ ಇಂದು 706 ಮಂದಿಗೆ ಕೊರೋನಾ ಸೋಂಕು: 681 ಜನರು ಗುಣಮುಖ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸ ದಿಗಂತ ವರದಿ,ಕಾಸರಗೋಡು:

ಜಿಲ್ಲೆಯಲ್ಲಿ ಗುರುವಾರ 706 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ಪೈಕಿ 688 ಜನರಿಗೆ ಸಂಪರ್ಕದ ಮೂಲಕ ವೈರಸ್ ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 681 ಮಂದಿ ಸೋಂಕುಮುಕ್ತರಾದರು. ಇದೇ ವೇಳೆ ಕೇರಳದಲ್ಲಿ ಹೊಸದಾಗಿ 12,818 ಜನರಿಗೆ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 12,034 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ. ರಾಜ್ಯದಲ್ಲಿ 13,454 ಜನರು ಗುಣಮುಖರಾದರು.
ಕೇರಳದ ಜಿಲ್ಲೆಗಳ ಪೈಕಿ ತೃಶೂರು ಜಿಲ್ಲೆಯಲ್ಲಿ 1605, ಕಲ್ಲಿಕೋಟೆ 1586, ಎರ್ನಾಕುಳಂ 1554, ಮಲಪ್ಪುರಂ 1249, ಪಾಲಕ್ಕಾಡು 1095, ತಿರುವನಂತಪುರ 987, ಕೊಲ್ಲಂ 970, ಕೋಟ್ಟಾಯಂ 763, ಆಲಪ್ಪುಳ 718, ಕಾಸರಗೋಡು 706, ಕಣ್ಣೂರು 552, ಪತ್ತನಂತ್ತಿಟ್ಟ 433, ಇಡುಕ್ಕಿ 318, ವಯನಾಡು ಜಿಲ್ಲೆಯಲ್ಲಿ 282 ಜನರಿಗೆ ಕೋವಿಡ್ ವೈರಸ್ ದೃಢಪಟ್ಟಿದೆ. ಈ ಮಧ್ಯೆ ಕೇರಳದಲ್ಲಿ ಕೊರೋನಾ ಸೋಂಕು ಬಾಧಿಸಿ ಗುರುವಾರ 122 ಮಂದಿ ಅಸುನೀಗಿದರು. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಒಟ್ಟು 15,739 ಜನರು ಮರಣ ಹೊಂದಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss