ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 116 ಮಂದಿಗೆ ಕೊರೋನಾ ಸೋಂಕು

ಹೊಸದಿಗಂತ ವರದಿ,ಕಾಸರಗೋಡು:

ಜಿಲ್ಲೆಯಲ್ಲಿ ಸೋಮವಾರ 116 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 107 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 42 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಒಬ್ಬರು ಸಾವಿಗೀಡಾದರು.
ಕೇರಳದಲ್ಲಿ 5797 ಹೊಸ ಪ್ರಕರಣ
ಕೇರಳದಲ್ಲಿ ಸೋಮವಾರ ಹೊಸದಾಗಿ 5797 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 5309 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 2796 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 19 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಭಾನುವಾರ ಶೇಕಡಾ 11.53 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!