ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ಗೆ ಕೊರೋನಾ ಸೋಂಕು: ಐಸಿಯುನಲ್ಲಿ ಚಿಕಿತ್ಸೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಖ್ಯಾತ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಕೋವಿಡ್ ಸೋಂಕು ತಗುಲಿದೆ.
ಕೊರೋನಾದಿಂದ ಆರೋಗ್ಯ ಭಾರೀ ಹದಗೆಟ್ಟಿದ್ದು, ಮುಂಬೈನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ವೈದ್ಯರು ಅವರ ಆರೋಗ್ಯದ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಲತಾ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಲತಾ ಅವರ ಸೊಸೆ ರಚನಾ ಮಾಹಿತಿ ನೀಡಿದ್ದು, ಕೋವಿಡ್‌ನ ಸೌಮ್ಯ ಲಕ್ಷಣಗಳು ಇವೆ. ಆದರೆ ಅವರ ವಯೋಸಹಜ ಕಾಯಿಲೆಗಳಿಂದ ಐಸಿಯುಗೆ ಶಿಫ್ಟ್ ಮಾಡಲಾಗಿದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!