ಹೊಸದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿದ್ದು, ಜನರು ಕಟ್ಟುನಿಟ್ಟಾಗಿ ನಿಯಮ ಪಾಲಿಸದಿದ್ದರೆ ಮತ್ತೆ ಲಾಕ್ ಡೌನ್ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ,ರಾಜ್ಯದ 8 ಜಿಲ್ಲೆಗಳಲ್ಲಿ ಈಗಾಗಲೇ ಕೋರೋನಾ ಸೋಂಕು ಹೆಚ್ಚಾಗಿದ್ದು, ಈ ಹಿನ್ನೆಲೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಜನರು ಅನಾವಶ್ಯಕ ಮನೆಯಿಂದ ಹೊರಬರಬಾರದು ಎಂದು ಸೂಚನೆ ಮಾಡಿದ್ದಾರೆ.
ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸರ್ವಪಕ್ಷ ಸಭೆ ಕರೆಯಲಾಗುವುದು. ಏಪ್ರಿಲ್ 18, 19ರಂದು ಸಭೆ ಕರೆದು ಚರ್ಚಿಸಿಸಲಾಗುವುದು. ವಿಪಕ್ಷ ನಾಯಕರಾದ ಸಿದ್ದರಾಮಯ್ಯ, ಹೆಚ್.ಡಿ. ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲರೊಂದಿಗೂ ಚರ್ಚಿಸಿ ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧರಿಸಲಾಗುವುದು ಎಂದರು.