ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………..
ಹೊಸದಿಗಂತ ಆನ್ಲೈನ್ ಡೆಸ್ಕ್:
ಈ ಬಾರಿ ಮನೆಯೊಳಗೆ ಹಬ್ಬ ಆಚರಿಸಿ, ಸಾರ್ವಜನಿಕವಾಗಿ ಹಬ್ಬ ಆಚರಣೆ ಮಾಡದಿರಿ ಎಂದು ಕೇಂದ್ರ ಸರ್ಕಾರ ಮನವಿ ಮಾಡಿದೆ.
ದೇಶದಲ್ಲಿ ಕೊರೋನಾ ನಿಯಂತ್ರಣ ಬರುತ್ತಿದ್ದು, ಇದರ ನಡುವೆ ಎರಡನೆಯ ಇನ್ನೂ ಸಂಪೂರ್ಣವಾಗಿ ಮುಗಿದಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ನೀತಿ ಆಯೋಗದ ಸದಸ್ಯ ಹಾಗೂ ಕೋವಿಡ್ ಕಾರ್ಯಪಡೆಯ ಮುಖ್ಯಸ್ಥ ಡಾ.ವಿ.ಕೆ. ಪೌಲ್ ಅವರು, ಜನರು ಗುಂಪು ಸೇರುವುದರಿಂದ, ಸಾರ್ವಜನಿಕವಾಗಿ ಗಣೇಶ ಚತುರ್ಥಿ, ದೀಪಾವಳಿ, ಈದ್ ಮೊದಲಾದ ಹಬ್ಬ ಆಚರಿಸುವುದರಿಂದ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಈಗಾಗಿ ಮನೆಯೊಳಗೆ ಹಬ್ಬ ಆಚರಿಸಬೇಕು ಎಂದು ಮನವಿ ಮಾಡಿದ್ದಾರೆ.
ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸುವುದು, ಅಂತರ ಪಾಲನೆ ಮುಖ್ಯವಾಗಿದೆ. ಕೊರೋನಾ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಕೊರೋನಾ ಎರಡನೇ ಅಲೆ ಇನ್ನೂ ಮುಗಿದಿಲ್ಲ. ಎಲ್ಲರೂ ಮನೆಯೊಳಗೆ ಹಬ್ಬ ಆಚರಿಸಬೇಕು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಪ್ರಧಾನ ನಿರ್ದೇಶಕ ಬಲರಾಮ್ ಭಾರ್ಗವ್ ತಿಳಿಸಿದ್ದಾರೆ.