Sunday, August 14, 2022

Latest Posts

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಭೀತಿ: ಸರಕಾರದಿಂದ ಟಫ್ ರೂಲ್ಸ್ ಜಾರಿ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಭೀತಿ ಉಂಟಾಗಿದ್ದು, ಕಳೆದ ಹಲವು ದಿನಗಳಿಂದ ಸೋಂಕಿತರ ಸಂಖ್ಯೆಯಲ್ಲಿ ತೀವ್ರ ಏರಿಕೆಯಾದ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆಯಿಂದ ಕಠಿಣ ನಿಯಮ ಜಾರಿ ಮಾಡಲಾಗಿದೆ.
ಸಭೆ, ಸಮಾರಂಭಕ್ಕೆ ಇಂತಿಷ್ಟೇ ಜನ ಸೇರಬೇಕೆಂದು ನಿಯಮ ರೂಪಿಸಲಾಗಿದೆ. ತೆರೆದ ಪ್ರದೇಶದಲ್ಲಿ ಮದುವೆ ಕಾರ್ಯಕ್ರಮಕ್ಕೆ 500 ಜನ, ಹಾಲ್ ಗಳಲ್ಲಿ ಮದುವೆ ಕಾರ್ಯಕ್ರಮಕ್ಕೆ 200 ಜನರಿಗೆ ಅವಕಾಶ ಇರುತ್ತದೆ.
ತೆರೆದ ಪ್ರದೇಶದಲ್ಲಿ ಹುಟ್ಟುಹಬ್ಬ ಆಚರಣೆಗೆ 100 ಜನ, ಹಾಲ್ ಗಳಲ್ಲಿ ಹುಟ್ಟುಹಬ್ಬ ಆಚರಣೆಗೆ 50 ಜನ ರಿಗೆ, ಅಂತ್ಯಕ್ರಿಯೆಯಲ್ಲಿ 50 ಜನರು ಮಾತ್ರ ಭಾಗಿಯಾಗಬೇಕು. ತೆರೆದ ಪ್ರದೇಶದಲ್ಲಿ ಧಾರ್ಮಿಕ ಆಚರಣೆಗೆ, ರಾಜಕೀಯ ಕಾರ್ಯಕ್ರಮಕ್ಕೆ 500 ಜನ ಭಾಗಿ ಆಗಬೇಕು ಎಂದು ಆರೋಗ್ಯ ಇಲಾಖೆಯಿಂದ ನಿಯಮಗಳನ್ನು ಜಾರಿ ಮಾಡಲಾಗಿದೆ.
ನೆರೆ ರಾಜ್ಯಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಟಫ್ ರೂಲ್ಸ್ ಜಾರಿಗೆ ತರಲಾಗಿದೆ. ಹೆಚ್ಚು ಜನ ಸೇರದಂತೆ ನಿರ್ಬಂಧ ಹೇರಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss