ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ದೇಶದಲ್ಲಿ ಕೋವಿಡ್-19 ಮೂರನೇ ಅಲೆ ಭೀತಿ ಶುರುವಾಗಿದ್ದು, ಉತ್ತರಾಖಂಡ ಸರ್ಕಾರ ಧಾರ್ಮಿಕ ಕನ್ವಾರ್ ಯಾತ್ರೆಯನ್ನು ರದ್ದುಗೊಳಿಸಿದೆ.
ಈ ಕುರಿತಂತೆ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದ್ದು, ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉತ್ತರಾಖಂಡ ಸರ್ಕಾರ ಕನ್ವಾರ್ ಯಾತ್ರೆಯನ್ನು ರದ್ದುಗೊಳಿಸಿದೆ ಎಂದು ತಿಳಿಸಿದೆ.
ಕನ್ವಾರ್ ಯಾತ್ರೆಯು ಶಿವ ಭಕ್ತರ ಹಬ್ಬವಾಗಿದ್ದು, ಶಿವ ದೇವಾಲಯಗಳಲ್ಲಿ ಗಂಗಾ ಜಲವನ್ನು ಸಂಗ್ರಹಿಸುವ ಸಲುವಾಗಿ ಭಕ್ತರು ಸಾಮೂಹಿಕವಾಗಿ ಬರಿಗಾಲಿನಿಂದ ಮೆರವಣಿಗೆ ನಡೆಸುತ್ತಾರೆ. ಈ ಮೆರವಣಿಗೆಯಲ್ಲಿ ಲಕ್ಷಾಂತರ ಭಕ್ತರು ಪಾಲ್ಗೊಳ್ಳುತ್ತಾರೆ.
ಈ ಹಿಂದೆ ಧಾರ್ಮಿಕ ಯಾತ್ರೆಗಳನ್ನು ರದ್ದುಗೊಳಿಸುವಂತೆ ಭಾರತೀಯ ವೈದ್ಯಕೀಯ ಸಂಘದ ಎಚ್ಚರಿಕೆ ನೀಡಿತ್ತು.