Sunday, April 11, 2021

Latest Posts

ಕಾಸರಗೋಡು ಜಿಲ್ಲೆಯಲ್ಲಿ ಕೊರೋನಾ ಸ್ಫೋಟ: ಇಂದು 234 ಮಂದಿಗೆ ಪಾಸಿಟಿವ್

ಹೊಸದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಗುರುವಾರ 234 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ಪೈಕಿ 211 ಜನರಿಗೆ ಸಂಪರ್ಕದಿಂದ ವೈರಸ್ ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 148 ಮಂದಿ ಗುಣಮುಖರಾದರು. ಇದೇ ವೇಳೆ ಕೇರಳದಲ್ಲಿ 4353 ಜನರಿಗೆ ಕೊರೋನಾ ಸೋಂಕು ದೃಢಗೊಂಡಿದೆ. ಇದರಲ್ಲಿ 3858 ಮಂದಿಗೆ ಸಂಪರ್ಕದ ಮೂಲಕ ವೈರಸ್ ತಗಲಿದೆ. ರಾಜ್ಯದಲ್ಲಿ 2205 ಜನರು ಗುಣಮುಖರಾದರು.
ಎರ್ನಾಕುಳಂ ಜಿಲ್ಲೆಯಲ್ಲಿ 654, ಕಲ್ಲಿಕೋಟೆ 453, ತಿರುವನಂತಪುರ 444, ತೃಶೂರು 393, ಮಲಪ್ಪುರಂ 359, ಕಣ್ಣೂರು 334, ಕೋಟ್ಟಾಯಂ 324, ಕೊಲ್ಲಂ 279, ಆಲಪ್ಪುಳ 241, ಕಾಸರಗೋಡು 234, ಪಾಲಕ್ಕಾಡು 190, ವಯನಾಡು 176, ಪತ್ತನಂತ್ತಿಟ್ಟ 147, ಇಡುಕ್ಕಿ ಜಿಲ್ಲೆಯಲ್ಲಿ 125 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮಧ್ಯೆ ಕೋವಿಡ್ ವೈರಸ್ ಬಾಧಿಸಿ ಕೇರಳದಲ್ಲಿ ಗುರುವಾರ 18 ಮಂದಿ ಮೃತಪಟ್ಟರು. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕು ತಗಲಿ ಇದುವರೆಗೆ 4728 ಜನರು ಸಾವಿಗೀಡಾದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss