ಹೊಸದಿಗಂತ ವರದಿ,ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಏರುಮುಖವಾಗಿದ್ದು, ತಿಂಗಳುಗಳ ಬಳಿಕ ಹೊಸ ಪ್ರಕರಣಗಳ ಪತ್ತೆ ಸಂಖ್ಯೆ 100ರ ಗಡಿ ದಾಟಿದೆ.
ಬುಧವಾರ 111 ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. 11 ಮಂದಿ ಗುಣಮುಖರಾಗಿದ್ದಾರೆ. ಬುಧವಾರ ಜಿಲ್ಲೆಯಲ್ಲಿ ಕೊರೋನಾದಿಂದ ಯಾವುದೇ ಸಾವು ಸಂಭವಿಸಿಲ್ಲ. ಪಾಸಿಟಿವಿಟಿ ದರ ಶೇ.1.43 ದಾಖಲಾಗಿದೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 116731ಕ್ಕೆ ಏರಿಕೆಯಾಗಿದೆ. ಈ ಪೈಕಿ 441 ಸಕ್ರಿಯ ಪ್ರಕರಣಗಳು. 114587 ಮಂದಿ ಗುಣಮುಖರಾಗಿದ್ದಾರೆ. 1703 ಮಂದಿ ಮೃತಪಟ್ಟಿದ್ದಾರೆ.