ಹೊಸದಿಗಂತ ವರದಿ,ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಕಳೆದ ಎರಡು ದಿನಗಳಿಂದ 500 ಕ್ಕಿಂತ ಮೇಲ್ಪಟ್ಟು ಪತ್ತೆಯಾಗುತ್ತಿದ್ದ ಸೋಂಕಿತರ ಸಂಖ್ಯೆ ಗುರುವಾರ 600ರ ಗಡಿ ದಾಟಿದೆ.
ಗುರುವಾರ ಜಿಲ್ಲೆಯಲ್ಲಿ 625 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. 228 ಮಂದಿ ಗುಣಮುಖರಾಗಿದ್ದಾರೆ. ಗುರುವಾರ ಜಿಲ್ಲೆಯಲ್ಲಿ ಕೊರೋನಾದಿಂದ ಯಾವುದೇ ಸಾವು ಸಂಭವಿಸಿಲ್ಲ. ಪಾಸಿಟಿವಿಟಿ ದರ ಶೇ.5.30 ದಾಖಲಾಗಿದೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 119544ಕ್ಕೆ ಏರಿಕೆಯಾಗಿದೆ. ಈ ಪೈಕಿ 1650 ಸಕ್ರಿಯ ಪ್ರಕರಣಗಳು. 115188 ಮಂದಿ ಗುಣಮುಖರಾಗಿದ್ದಾರೆ. 1706 ಮಂದಿ ಮೃತಪಟ್ಟಿದ್ದಾರೆ.