ಕಾಸರಗೋಡು ಜಿಲ್ಲೆಯಲ್ಲಿ 35 ಮಂದಿಗೆ ಕೊರೋನಾ ದೃಢ

ಹೊಸದಿಗಂತ ವರದಿ,ಕಾಸರಗೋಡು:

ಜಿಲ್ಲೆಯಲ್ಲಿ ಮಂಗಳವಾರ 35 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 28 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 32 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಸಾವು ಸಂಭವಿಸಲಿಲ್ಲ.
ಕೇರಳದಲ್ಲಿ 1791 ಹೊಸ ಪ್ರಕರಣ
ಕೇರಳದಲ್ಲಿ ಮಂಗಳವಾರ ಹೊಸದಾಗಿ 1791 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 1692 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 1871 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 4 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಮಂಗಳವಾರ ಶೇಕಡಾ 05.57 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!