ಉತ್ತರ ಕೊರಿಯಾದಲ್ಲಿ ಮೊದಲ ಬಾರಿಗೆ ಕೊರೋನಾ: ಆರು ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಉತ್ತರ ಕೊರಿಯಾದಲ್ಲಿ ಮೊದಲ ಬಾರಿಗೆ ಕೊರೋನಾ ರೂಪಾಂತರಿ ಒಮಿಕ್ರಾನ್‌ ದೃಢಪಟ್ಟಿದ್ದು, ಆರು ಮಂದಿ ಮೃತಪಟ್ಟಿದ್ದಾರೆ ಎಂದು ಸರ್ಕಾರಿ ಸುದ್ದಿಸಂಸ್ಥೆ ಕೆಸಿಎನ್‌ಎ ಶುಕ್ರವಾರ ವರದಿ ಮಾಡಿದೆ.
ಮೃತಪಟ್ಟಿರುವ ಆರು ಜನರ ಪೈಕಿ ಒಬ್ಬ ವ್ಯಕ್ತಿಗೆ ಕೋವಿಡ್‌ ದೃಢಪಟ್ಟಿತ್ತು. ಉಳಿದವರೂ ಜ್ವರದಿಂದ ಬಳಲುತ್ತಿದ್ದರು, ಆದರೆ ಇವರ ಪೈಕಿ ಎಷ್ಟು ಜನರಿಗೆ ಕೋವಿಡ್‌ ದೃಢಪಟ್ಟಿತ್ತು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ .
ದೇಶದಾದ್ಯಂತ ಜ್ವರ ದಿಢೀರ್‌ನೆ ವ್ಯಾಪಕವಾಗುತ್ತಿದ್ದು, ಈ ಸಂಬಂಧ 3.50 ಲಕ್ಷ ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ ಕೋವಿಡ್ ಪರೀಕ್ಷೆಗಳು ನಡೆಯುತ್ತಿಲ್ಲ. ಹೀಗಾಗಿ ಈಗ ದಿಢೀರ್‌ನೆ ವ್ಯಾಪಕವಾಗುತ್ತಿರುವ ಜ್ವರಕ್ಕೆ ಕಾರಣಗಳೇನು ಎಂಬುದು ತಿಳಿದು ಬಂದಿಲ್ಲ ಎಂದು ತಜ್ಞರು ಹೇಳಿದ್ದಾರೆ.
ಕೋವಿಡ್‌ನ ಮೊದಲ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಉತ್ತರ ಕೊರಿಯಾದಲ್ಲಿ ಗುರುವಾರ ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಘೋಷಿಸಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!