Saturday, June 25, 2022

Latest Posts

ಮಕ್ಕಳಿಗೆ ಕಾಡುತ್ತಿದೆ ಕೊರೋನಾ: ಆಂಧ್ರ ಸರ್ಕಾರಕ್ಕೆ ಶುರುವಾಗಿದೆ ಆತಂಕ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಆಂಧ್ರಪ್ರದೇಶದಲ್ಲಿ ಕೊರೋನಾ ಪಾಸಿಟಿವಿಟಿ ಪ್ರಮಾಣದಲ್ಲಿ ಸತತವಾಗಿ ಇಳಿಕೆಯಾಗುತ್ತಿದ್ದು, ಆದರೆ ಸರ್ಕಾರಕ್ಕೆ ಈಗ ಹೊಸ ಆತಂಕ ಆರಂಭವಾಗಿದೆ. ಕಳೆದ ಕೆಲ ದಿನಗಳಿಂದ ಮಕ್ಕಳಲ್ಲಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದೆ.
ಚಿತ್ತೂರು ಜಿಲ್ಲೆಯ ತಿರುಪತಿಯ ರುಯಾ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ನಾಲ್ಕು ವರ್ಷದಿಂದ ಹತ್ತು ವರ್ಷದ 9 ಮಕ್ಕಳು ಕೊರೋನಾ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿರುವುದು ಆಡಳಿತವನ್ನು ಎಚ್ಚರಿಸುವಂತೆ ಮಾಡಿದೆ. 9 ಮಕ್ಕಳ ಪೈಕಿ ಮೂವರು ಐಸಿಯುನಲ್ಲಿದ್ದು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್‌ ಜಗನ್‌ಮೋಹನ್ ರೆಡ್ಡಿ ಮೂರನೇ ಅಲೆಯಲ್ಲಿ ಮಕ್ಕಳ ಮೇಲೆ ಉಂಟಾಗಬಹುದಾದ ಪರಿಣಾಮ ತೀವ್ರತೆಯ ಬಗ್ಗೆ ಪೋಷಕರಲ್ಲಿ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಮಕ್ಕಳ ರೋಗಲಕ್ಷಣಗಳನ್ನು ಗುರುತಿಸಲು ಆಶಾ ಮತ್ತು ಆರೋಗ್ಯ ಕಾರ್ಯಕರ್ತರಿಗೆ ತರಬೇತಿ ನೀಡಲು ಆಂಧ್ರಪ್ರದೇಶ ಸರ್ಕಾರ ನಿರ್ಧಾರವನ್ನು ತೆಗೆದುಕೊಂಡಿದೆ.
ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸ್ಥಳೀಯ ಆಸ್ಪತ್ರೆಗಳಲ್ಲಿ ಮಕ್ಕಳಿಗೆ ಚಿಕಿತ್ಸೆಯನ್ನು ನೀಡಲು ಬೇಕಾದ ಸಿದ್ಧತೆಗಳನ್ನು ಆಂಧ್ರಪ್ರದೇಶ ಸರ್ಕಾರ ಆರಂಭಿಸಿದೆ. ವಿಶಾಖಪಟ್ಟಣಂ, ತಿರುಪತಿ ಹಾಗೂ ಕೃಷ್ಣಾ-ಗುಂಟೂರು ಭಾಗದಲ್ಲಿ ಮೂರು ಮಕ್ಕಳ ಆರೈಕೆ ಕೇಂದ್ರಗಳನ್ನು ಈಗ ಸ್ಥಾಪನೆ ಮಾಡಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss