ರಾಷ್ಟ್ರ ರಾಜಧಾನಿಯಲ್ಲಿ ದಿಢೀರ್‌ ಏರಿಕೆ ಕಂಡ ಕೊರೋನಾ: ಸಾವಿರ ಗಡಿ ದಾಟಿದ ಪಾಸಿಟಿವ್ ಕೇಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಎಲ್ಲೆಡೆ ಕೊರೋನಾ ಸೋಂಕಿನ ಪ್ರಮಾಣ ಇಳಿಮುಖವಾಗುತ್ತಿದ್ದ ವೇಳೆ ದೆಹಲಿಯಲ್ಲಿ ದಿಡೀರ್ ಸಾವಿರ ಗಡಿ ದಾಟಿದ್ದು, 1,009 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಬುಧವಾರ ತಿಳಿಸಿದೆ. ಈ ಮೂಲಕ ಪಾಸಿಟಿವಿಟಿ ದರ ಶೇ.5.07ಕ್ಕೆ ತಲುಪಿದೆ.
ಇದಲ್ಲದೆ, ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ ಮತ್ತೊಬ್ಬ ಸೋಂಕಿತ ಬಲಿಯಾಗಿದ್ದಾರೆ. ನಗರದಲ್ಲಿ ಕೋವಿಡ್ -19ನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 26,161 ರಷ್ಟಿದೆ ಮತ್ತು ಸಾವಿನ ಪ್ರಮಾಣವು ಶೇಕಡಾ 1.4 ರಷ್ಟಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!