ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊರೋನಾ ಸೋಂಕು ವೇಗವಾಗಿ ಹರಡುತ್ತಿದ್ದು, ಬೆಂಗಳೂರಿನಲ್ಲಿ ಜನವರಿ 31ರವರೆಗೆ ಶಾಲೆಗಳಿಗೆ ರಜೆ ವಿಸ್ತರಿಸಲಾಗಿದೆ.
ಜ.19 ರವರೆಗೆ ಮಾತ್ರ ಇದ್ದ ರಜೆ ಅವಧಿಯನ್ನು ಜ.31ರವರೆಗೆ ವಿಸ್ತರಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಜಿಲ್ಲೆಗಳಲ್ಲಿ ಪಾಸಿಟಿವಿಟಿ ಪ್ರಮಾಣ ಶೇ.5ಕ್ಕಿಂತ ಹೆಚ್ಚಿದ್ದರೆ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಬೆಂಗಳೂರಿನ ಸ್ಥಿತಿಗೆ ತಕ್ಕಂತೆ ನಾವು ನಿರ್ಧಾರ ಮಾಡಿದ್ದೇವೆ. ಗ್ರಾಮಾಂತರ ಪ್ರದೇಶಗಳಲ್ಲಿ ಸೋಂಕು ಕಡಿಮೆಯಿದೆ. ಮಕ್ಕಳ ಶಿಕ್ಷಣದ ಮೇಲೆ ಪರಿಣಾಮ ಬೀರದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದಿದ್ದಾರೆ.