spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊರೋನಾ ಭೀತಿ: ಮತ್ತೆ ಅಲರ್ಟ್ ಆದ ಉಡುಪಿ ಜಿಲ್ಲಾಡಳಿತ, 10 ಕಡೆಗಳಲ್ಲಿ ಚೆಕ್‌ಪೋಸ್ಟ್‌ ಓಪನ್

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………

ಹೊಸದಿಗಂತ ವರದಿ, ಉಡುಪಿ :

ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಬಾರದಿರುವುದು ಮತ್ತು ಹೊರ ರಾಜ್ಯಗಳಾದ ಮಹಾರಾಷ್ಟ್ರ ಹಾಗೂ ಕೇರಳದಿಂದ ಆತಂಕವಿರುವುದರಿಂದ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಭಾನುವಾರದಿಂದ ತಪಾಸಣೆಗಾಗಿ ಚೆಕ್‌ಪೋಸ್ಟ್‌ಗಳನ್ನು ತೆರೆದಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೆಚ್ಚು ಪಾಸಿಟಿವಿಟಿ ದರವಿರುವ ಹಾಗೂ ಗಡಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕಾಗಿ ತುರ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಅದರಂತೆ ಜಿಲ್ಲಾಧಿಕಾರಿ ಜಿ. ಜಗದೀಶ ಅವರು ಜಿಲ್ಲೆಯನ್ನು ಪ್ರವೇಶಿಸುವ ಗಡಿಗಳಲ್ಲಿ ವಾಹನ ಹಾಗೂ ಪ್ರಯಾಣಿಕರ ತಪಾಸಣೆಗಾಗಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲು ಸೂಚಿಸಿದ್ದರು.
ಜಿಲ್ಲೆಯಲ್ಲಿ 10 ಚೆಕ್‌ಪೋಸ್ಟ್‌ಗಳು
ಉಡುಪಿ ಜಿಲ್ಲೆಗೆ ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳ ಸಂಪರ್ಕ ಹೆಚ್ಚಾಗಿದೆ. ಕೊಲ್ಲೂರು ದೇವಸ್ಥಾನ, ಮಣಿಪಾಲ, ನಿಟ್ಟೆಯಂತಹ ಶಿಕ್ಷಣ ಸಂಸ್ಥೆಗಳಿಗೆ ಕೇರಳಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿ ಪ್ರದೇಶಗಳಲ್ಲಿ 10 ಕಡೆ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದೆ. ಶಿರೂರು, ಹೊಸಂಗಡಿ, ಕೊಲ್ಲೂರು ಸಮೀಪದ ದಲಿ, ಸೋಮೇಶ್ವರ, ಹೆಜಮಾಡಿ, ಮಾಳ, ಹೊಸ್ಮಾರು ಸಹಿತ ಜಿಲ್ಲೆಯನ್ನು ಪ್ರವೇಶಿಸುವ ಗಡಿ ಭಾಗದಲ್ಲಿ ಈ ಚೆಕ್‌ಪೋಸ್ಟ್‌ಗಳಿವೆ.
ಈ ಹಿಂದೆಯೇ ಅಸ್ತಿತ್ವದಲ್ಲಿದ್ದ ಚೆಕ್‌ಪೋಸ್ಟ್‌ಗಳನ್ನು ಮತ್ತೆ ಸಕ್ರಿಯಗೊಳಿಸಲಾಗಿದೆ. ಈ ಚೆಕ್‌ಪೋಸ್ಟ್‌ಗಳಲ್ಲಿ ಪೊಲೀಸರ ಜೊತೆಗೆ ಕಂದಾಯ ಇಲಾಖೆಯ ಅಧಿಕಾರಿ ಅಥವಾ ಸಿಬ್ಬಂದಿ ಇರುತ್ತಾರೆ. ಜಿಲ್ಲೆಯನ್ನು ಪ್ರವೇಶಿಸುವ ಎಲ್ಲ ವಾಹನಗಳ ತಪಾಸಣೆ ನಡೆಸುತ್ತೇವೆ. ಕೇರಳ, ಮಹಾರಾಷ್ಟ್ರ, ಗೋವಾದಿಂದ ಬರುವ ವಾಹನಗಳಲ್ಲಿರುವ ಪ್ರಯಾಣಿಕರ ಆರ್‌ಟಿಪಿಸಿಆರ್ ಅಥವಾ ಕೋವಿಡ್ ಲಸಿಕೆ ಎರಡು ಡೋಸ್ ಆಗಿರುವ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ‘ಹೊಸ ದಿಗಂತ’ಕ್ಕೆ ತಿಳಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss