Sunday, April 18, 2021

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ದಿನ 145 ಮಂದಿಗೆ ಕೊರೋನಾ ಪಾಸಿಟಿವ್

ಹೊಸದಿಗಂತ ವರದಿ,ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಗುರುವಾರ ಒಂದೇ ದಿನ 145 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದೇ ವೇಳೆ 55 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 36400 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, 743 ಮಂದಿ ಸಾವನ್ನಪ್ಪಿದ್ದಾರೆ. 34,849 ಮಂದಿ ಕೊರೋನಾದಿಂದ ಗುಣಖರಾಗಿದ್ದಾರೆ.
ದ.ಕ.ಜಿಲ್ಲೆಯಲ್ಲಿ ಒಟ್ಟು 43859 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು 45,60,730 ರೂ.ದಂಡ ವಸೂಲಿಯಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss