Monday, August 8, 2022

Latest Posts

ಮಹಾರಾಷ್ಟ್ರ ವಿಧಾನಸಭೆಯ 36 ಮಂದಿಗೆ ಕೊರೋನಾ ಪಾಸಿಟಿವ್

ಹೊಸದಿಗಂತ ಆನ್ ಲೈನ್ ಡೆಸ್ಕ್:

ಮಹಾರಾಷ್ಟ್ರ ವಿಧಾನಸಭೆಯ 36 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಮಾರ್ಚ್ 6 ಮತ್ತು 7 ರಂದು ಮಹಾರಾಷ್ಟ್ರದ ಬಜೆಟ್ ಅಧಿವೇಶನಕ್ಕಾಗಿ ಒಟ್ಟು 2,746 ಮಾದರಿಗಳನ್ನು ಪರೀಕ್ಷಿಸಲಾಯಿತು, ಅದರಲ್ಲಿ 36 ಪಾಸಿಟಿವ್ ಕಂಡುಬಂದಿವೆ ಎಂದು ಜೆಜೆ ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.
ವಿಧಾನಸಭೆ ಅಧಿವೇಶನಗಳಿಗೆ ಹಾಜರಾಗುತ್ತಿರುವ ಶಾಸಕರು, ಅವರ ಸಿಬ್ಬಂದಿ, ಸರ್ಕಾರಿ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಮತ್ತು ಪತ್ರಕರ್ತರಿಂದ ಮಾದರಿಗಳನ್ನು ತೆಗೆದುಕೊಳ್ಳಲಾಗಿದೆ. ಒಟ್ಟು 3,900 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಿದಾಗ ಮತ್ತು 42 ಮಂದಿಗೆ ಕೊರೋನಾ ಪಾಸಿಟಿವ್ ಕಂಡುಬಂದಿತ್ತು,
ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸೋಮವಾರ ಬೆಳಿಗ್ಗೆ ಬಜೆಟ್ ಮಂಡಿಸಲಿದೆ. ಹಣಕಾಸು ಸಚಿವಾಲಯದ ಉಸ್ತುವಾರಿ ಹೊಂದಿರುವ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಬಜೆಟ್ ಮಂಡಿಸಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss