4 ತಿಂಗಳ ಪುಟ್ಟ ಕಂದಮ್ಮನಿಗೂ ಬಂತು ಕೊರೋನಾ ಪಾಸಿಟಿವ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ದೆಹಲಿಯಲ್ಲಿ 4 ತಿಂಗಳ ಪುಟ್ಟ ಕಂದಮ್ಮನಿಗೆ ಕೊರೋನಾ ಸೋಂಕು ತಗುಲಿದ್ದು, ಆತಂಕ ಮೂಡಿಸಿದೆ.
ದೆಹಲಿಯ ಎಲ್‌ಎನ್‌ಜೆಪಿ ಆಸ್ಪತ್ರೆಯಲ್ಲಿ ಒಟ್ಟು 7 ಕೊರೊನಾ ಸೋಂಕಿತರು ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.ಇವರಲ್ಲಿ 5 ವಯಸ್ಕರು ಮತ್ತು ಇಬ್ಬರು ಮಕ್ಕಳಿದ್ದಾರೆ. ಪಾಸಿಟಿವ್‌ ಇರುವ ಒಂದು ಮಗುವಿಗೆ ಕೇವಲ 4 ತಿಂಗಳು. ಸದ್ಯ ಮಗುವಿಗೆ ಆಕ್ಸಿಜನ್‌ ಸಪೋರ್ಟ್‌ ನೀಡಲಾಗಿದೆ.
ಮಗುವಿನ ತಂದೆ ಕೂಡ ಕೋವಿಡ್ ಪಾಸಿಟಿವ್ ಆಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೋಷಕರು ಲಸಿಕೆ ಹಾಕಿಸಿಕೊಳ್ಳದಿದ್ದರೆ ಮಕ್ಕಳಿಗೆ ಸೋಂಕು ತಗುಲಬಹುದು ಎಂದು ವೈದ್ಯರು ಎಚ್ಚರಿಸಿದ್ದಾರೆ. ಸದ್ಯ ದೆಹಲಿಯಲ್ಲಿ ಕೋವಿಡ್ ಸೋಂಕಿನ ಪ್ರಮಾಣವು ಶೇ.5 ಕ್ಕಿಂತ ಹೆಚ್ಚಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!