ಹೊಸದಿಗಂತ ವರದಿ, ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸತತ ಎರಡನೇ ದಿನ ಕೋವಿಡ್ ಸೋಂಕಿತರ ಪತ್ತೆ ಸಂಖ್ಯೆ500ರ ಗಡಿ ದಾಟಿದೆ.
ಮಂಗಳವಾರ ಜಿಲ್ಲೆಯಲ್ಲಿ 583 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದರೆ, ಬುಧವಾರ 519 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
137 ಮಂದಿ ಗುಣಮುಖರಾಗಿದ್ದಾರೆ. ಬುಧವಾರ ಜಿಲ್ಲೆಯಲ್ಲಿ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ. ಪಾಸಿಟಿವಿಟಿ ದರ ಶೇ.5.04 ದಾಖಲಾಗಿದೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 118919ಕ್ಕೆ ಏರಿಕೆಯಾಗಿದೆ. ಈ ಪೈಕಿ 1253 ಸಕ್ರಿಯ ಪ್ರಕರಣಗಳು. 114960 ಮಂದಿ ಗುಣಮುಖರಾಗಿದ್ದಾರೆ. 1706 ಮಂದಿ ಮೃತಪಟ್ಟಿದ್ದಾರೆ.