ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 573 ಮಂದಿಗೆ ಕೊರೋನಾ ಪಾಸಿಟಿವ್

ಹೊಸದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಸೋಮವಾರ 573 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 521 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 553 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಒಬ್ಬರು ಸಾವಿಗೀಡಾದರು.

ಕೇರಳದಲ್ಲಿ 26,514 ಹೊಸ ಪ್ರಕರಣ

ಕೇರಳದಲ್ಲಿ ಸೋಮವಾರ ಹೊಸದಾಗಿ 26,514 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 24,612 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 30,710 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 13 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸೋಮವಾರ ಶೇಕಡಾ 34.13 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!