ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 792 ಮಂದಿಗೆ ಕೊರೋನಾ ಪಾಸಿಟಿವ್, 335 ಸೋಂಕಿತರು ​ಗುಣಮುಖ

ಹೊಸದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳಗೊಳ್ಳುತ್ತಲೇ ಇದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3447ಕ್ಕೆ ಏರಿಕೆಯಾಗಿದೆ.
ಶನಿವಾರ ಜಿಲ್ಲೆಯಲ್ಲಿ 792 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. 335 ಮಂದಿ ಗುಣಮುಖರಾಗಿದ್ದಾರೆ. ಶನಿವಾರ ಜಿಲ್ಲೆಯಲ್ಲಿ ಕೊರೋನಾದಿಂದ ಯಾವುದೇ ಸಾವು ಸಂಭವಿಸಿಲ್ಲ. ಪಾಸಿಟಿವಿಟಿ ದರ ಶೇ.7.16 ದಾಖಲಾಗಿದೆ.
ಜಿಲ್ಲೆಯಲ್ಲಿ ಈಗ ಸೋಂಕಿತರ ಸಂಖ್ಯೆ 120975ಕ್ಕೆ ಏರಿಕೆಯಾಗಿದೆ. ಈ ಪೈಕಿ 3447 ಸಕ್ರಿಯ ಪ್ರಕರಣಗಳು. 115822 ಮಂದಿ ಗುಣಮುಖರಾಗಿದ್ದಾರೆ. 1706 ಮಂದಿ ಮೃತಪಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!