ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ ಏರಿಕೆಯಾದ ಕೊರೋನಾ: ಇಂದು 1728 ಮಂದಿಗೆ ಪಾಸಿಟಿವ್

ಹೊಸದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಕೊರೋನಾ ಸೋಂಕು ತಗುಲಿದವರ ಸಂಖ್ಯೆ ಮಂಗಳವಾರ ಭಾರೀ ಏರಿಕೆಯಾಗಿದೆ. ಅದರಂತೆ 1728 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 1434 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 611 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಮೂವರು ಸಾವಿಗೀಡಾದರು.

ಕೇರಳದಲ್ಲಿ 55,475 ಹೊಸ ಪ್ರಕರಣ

ಕೇರಳದ ಎಲ್ಲಾ ಜಿಲ್ಲೆಗಳಲ್ಲೂ ಕೊರೋನಾ ಸೋಂಕು ಮತ್ತೆ ವ್ಯಾಪಕವಾಗಿ ಹರಡುತ್ತಿದ್ದು , ಮಂಗಳವಾರ ಹೊಸದಾಗಿ ಬರೋಬ್ಬರಿ 55,475 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 51,547 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 30,226 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 70 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಮಂಗಳವಾರ ಶೇಕಡಾ 49.4 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!