Thursday, August 11, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 127 ಮಂದಿಗೆ ಕೊರೋನಾ ಸೋಂಕು ದೃಢ

ಹೊಸದಿಗಂತ ವರದಿ,ಕಾಸರಗೋಡು:

ಜಿಲ್ಲೆಯಲ್ಲಿ ಮಂಗಳವಾರ 127 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 118 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 167 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ.
ಕೇರಳದಲ್ಲಿ ಮಂಗಳವಾರ ಹೊಸದಾಗಿ 7163 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 6791 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 6960 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 90 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸೋಮವಾರ ಶೇಕಡಾ 10.88 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss