spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, December 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊಡಗು: ಮತ್ತೆ 26 ಮಂದಿಯಲ್ಲಿ ಕೊರೋನಾ ಸೋಂಕು ದೃಢ

- Advertisement -Nitte

ದಿಗಂತ ವರದಿ ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಗುರುವಾರ 26 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 8, ಸೋಮವಾರಪೇಟೆ ತಾಲೂಕಿನಲ್ಲಿ 3 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 15 ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿನ ಕೋವಿಡ್ ಸೋಂಕಿತರ 34,441ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 12 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಇದುವರೆಗೆ 33,431 ಮಂದಿ ಸೋಂಕು ಮುಕ್ತರಾದಂತಾಗಿದೆ.
ಪ್ರಸಕ್ತ ಜಿಲ್ಲೆಯಲ್ಲಿ 588 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೆ 422 ಮಂದಿ ಸಾವಿಗೀಡಾಗಿದ್ದಾರೆ. 54 ಕಂಟೈನ್ ಮೆಂಟ್ ವಲಯಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ. 0.7ರಷ್ಟಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss