ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೊರೋನಾ ಸೋಂಕಿನ ಪ್ರಮಾಣ ಮತ್ತೆ ಹೆಚ್ಚುತ್ತಿರುವ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಉತ್ತರಾಖಂಡ ಸರ್ಕಾರ ಎಲ್ಲರಿಗೂ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಿದ್ದು,
ಮಹಾರಾಷ್ಟ್ರ, ಗುಜರಾತ್, ಕೇರಳ, ಮಧ್ಯ ಪ್ರದೇಶ ಹಾಗೂ ಚತ್ತೀಘಡ ದಿಂದ ಉತ್ತರಾಖಂಡಕ್ಕೆ ಬರುವ ಜನರಿಗೆ ಕೋವಿಡ್ ಟೆಸ್ಟ್ ರಿಪೋರ್ಟ್ ಕಡ್ಡಾಯವೆಂದು ಆದೇಶ ಹೊರಡಿಸಿದೆ.
ಈ ಐದು ರಾಜ್ಯಗಳಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದ ಹಿನ್ನಲೆಯಲ್ಲಿ ಉತ್ತರಾಖಂಡ ಸರ್ಕಾರ ಈ ರೀತಿಯ ನಿರ್ಧಾರಕ್ಕೆ ಕೈಗೊಂಡಿದ್ದು, ಸರ್ಕಾರ ಟೆಸ್ಟಿಂಗ್ ಸೆಂಟರ್ ಗಳನ್ನು ತೆರೆದಿದೆ.