ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, June 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊರೋನಾ ಸೋಂಕು ಇಳಿಮುಖ, 54 ಗ್ರಾಮಗಳು ಕೋವಿಡ್ ಮುಕ್ತ: ಅಂಗಾರ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಚಿಕ್ಕಮಗಳೂರು:

ಜಿಲ್ಲೆಯಲ್ಲಿ ಕೊರೋನಾ ಸೋಂಕು ಇಳಿಮುಖವಾಗುತ್ತಿದ್ದು, ಒಟ್ಟು 54 ಗ್ರಾಮಗಳು ಕೋವಿಡ್ ಮುಕ್ತ ಗ್ರಾಮಗಳಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ತಿಳಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ನಡೆಸಿದ ವೀಡಿಯೋ ಕಾನ್ಫರೆನ್ಸ್‍ನಲ್ಲಿ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಬರುತ್ತಿರುವ ಕುರಿತು ಮಾಹಿತಿ ನೀಡಿದ್ದೇವೆ ಎಂದರು.
ಕಳೆದ ಮೇ.27 ಕ್ಕೆ ಜಿಲ್ಲೆಯಲ್ಲಿ 7250 ಕೊರೋನಾ ಸಕ್ರೀಯ ಪ್ರಕರಣಗಳಿತ್ತು, ಅದು ಮೇ. 30 ಕ್ಕೆ 6266 ಕ್ಕೆ ಇಳಿದಿತ್ತು. ಇದೀಗ ಜೂನ್ 9 ಕ್ಕೆ 4422 ಕ್ಕೆ ಕುಸಿದಿದ್ದು, ಮುಂದೆ ಇನ್ನಷ್ಟು ನಿಯಂತ್ರಣಕ್ಕೆ ಬರಲಿದೆ ಎಂದು ಹೇಳಿದರು.
ಇದೀಗ ಸೋಂಕು ದೃಢಪಟ್ಟವರು ಕೋವಿಡ್ ಕೇರ್ ಸೆಂಟರ್‍ಗೆ ಬರಬೇಕು ಎನ್ನುವುದನ್ನು ಕಡ್ಡಾಯಗೊಳಿಸಿರುವುದಲ್ಲದೆ, ವೈದ್ಯರ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದ ಮೂಲಕ ವೈದ್ಯರು ಗ್ರಾಮಗಳಿಗೆ ಭೇಟಿ ನೀಡಿ 4445 ಜನರನ್ನು ತಪಾಸಣೆಗೊಳಪಡಿಸಿದ್ದು, ಈ ಪೈಕಿ8 129 ಮಂದಿ ಸೋಂಕು ತಗುಲಿರುವುದು ಪತ್ತೆಯಾಗಿದೆ. ಅವರನ್ನು ಕೇರ್ ಸೆಂಟರ್‍ಗೆ ಕರೆತಂದಿರುವುದರಿಂದ ಸೋಂಕು ಹಬ್ಬರುವುದನ್ನು ತಡೆದಂತಾಗಿದೆ ಎಂದು ತಿಳಿಸಿದರು.
ಜಿಲ್ಲೆ ಸೋಂಕಿತರ ಪ್ರಮಾಣದಲ್ಲಿ ರಾಜ್ಯಕ್ಕೇ ಮೊದಲ ಸ್ಥಾನದಲ್ಲಿರುವ ಕುರಿತು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಇದೇ ಸಂದರ್ಭದಲ್ಲಿ ಉತ್ತರಿಸಿ, ಬೆಂಗಳೂರು ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಿಂದ ನಮ್ಮ ಜಿಲ್ಲೆಗೆ ದೊಡ್ಡ ಸಂಖ್ಯೆಯಲ್ಲಿ ಬಂದವರಿಂದ ಗ್ರಾಮೀಣ ಭಾಗದಲ್ಲಿ ಸೋಂಕು ಹೆಚ್ಚಾಗಲು ಕಾರಣವಾಯಿತು. ಬೆಂಗಳೂರಿನಲ್ಲಿ ಸೊಂಕಿನ ಪ್ರಕರಣ ಮಾರ್ಚ್ 3 ಕ್ಕೆ ಅತ್ಯಂತ ಎತ್ತರಕ್ಕೆ ಹೋಗಿತ್ತು. ನಂತರ ಇಳಿಮುಖವಾಗುತ್ತಿದೆ. ಇದೇ ರೀತಿ ಜಿಲ್ಲೆಯಲ್ಲೂ ಪಾಸಿವಿಟಿ ದರ ಉತ್ತುಂಗಕ್ಕೆ ತಲುಪಿ ಇದೀಗ ಇಳಿಮುಖವಾಗುತ್ತಿದೆ. ಮೊದಲಿದ್ದ ಸ್ಥಿತಿಗೆ ಬರಲು ಇನ್ನೂ 15 ದಿನ ಬೇಕಾಗುತ್ತದೆ ಎಂದು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss