Saturday, June 25, 2022

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 22 ಮಂದಿಯಲ್ಲಿ ಕೊರೋನಾ ಸೋಂಕು, ಪಾಸಿಟಿವಿಟಿ ದರ 0.28%

ಹೊಸದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 22 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.
37 ಮಂದಿ ಗುಣಮುಖರಾಗಿದ್ದಾರೆ. ಭಾನುವಾರ ಕೊರೋನಾದಿಂದ ಯಾವುದೇ ಸಾವು ಸಂಭವಿಸಿಲ್ಲ.
ಪಾಸಿಟಿವಿಟಿ ದರ ಶೇ.0.28 ದಾಖಲಾಗಿದೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 115086ಕ್ಕೆ ಏರಿಕೆಯಾಗಿದೆ. ಈ ಪೈಕಿ 325 ಸಕ್ರಿಯ ಪ್ರಕರಣಗಳು. 113086 ಮಂದಿ ಗುಣಮುಖರಾಗಿದ್ದಾರೆ. 1675 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 88274 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, 10720170 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss