ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 639 ಮಂದಿಯಲ್ಲಿ ಕೊರೋನಾ ಸೋಂಕು, ಪಾಸಿಟಿವಿಟಿ ದರ 5.52%

ಹೊಸದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಏರುಮುಖವಾಗಿಯೇ ಸಾಗುತ್ತಿದೆ. ನೈಟ್ ಕರ್ಫ್ಯೂ, ವಾರಾಂತ್ಯ ಕರ್ಫ್ಯೂ ನಿರ್ಬಂಧಗಳ ನಡುವೆ ಪಾಸಿಟಿವ್ ಪ್ರಕರಣಗಳ ಪತ್ತೆ ಸಂಖ್ಯೆ ಹೆಚ್ಚಳಗೊಳ್ಳುತ್ತಲೇ ಇದೆ.
ಶುಕ್ರವಾರ ಜಿಲ್ಲೆಯಲ್ಲಿ 639 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. 299 ಮಂದಿ ಗುಣಮುಖರಾಗಿದ್ದಾರೆ. ಶುಕ್ರವಾರ ಜಿಲ್ಲೆಯಲ್ಲಿ ಕೊರೋನಾದಿಂದ ಯಾವುದೇ ಸಾವು ಸಂಭವಿಸಿಲ್ಲ. ಪಾಸಿಟಿವಿಟಿ ದರ ಶೇ.5.52 ದಾಖಲಾಗಿದೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 120183ಕ್ಕೆ ಏರಿಕೆಯಾಗಿದೆ. ಈ ಪೈಕಿ 2900 ಸಕ್ರಿಯ ಪ್ರಕರಣಗಳು. 115487 ಮಂದಿ ಗುಣಮುಖರಾಗಿದ್ದಾರೆ. 1706 ಮಂದಿ ಮೃತಪಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!