Thursday, March 30, 2023

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರಿಗೆ ಕೊರೋನಾ ಸೋಂಕು

ಹೊಸದಿಗಂತ ವರದಿ,ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ (ಮಾ.04) ಇಬ್ಬರಿಗೆ ಕೊರೋನಾ ಸೋಂಕು ದೃಢ ಪಟ್ಟಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ. ಐದು ದಿನಗಳಿಂದ ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿ ಒಂದಂಕೆಯಲ್ಲಿ ಮುಂದುವರಿದಿದೆ.
ಇದೇ ವೇಳೆ 22 ಮಂದಿ ಶುಕ್ರವಾರ ಸೋಂಕು ಮುಕ್ತರಾಗಿದ್ದಾರೆ. ಈ ತನಕ ಜಿಲ್ಲೆಯಲ್ಲಿ 1,33,532 ಮಂದಿ ಕೋವಿಡ್ ಮುಕ್ತರಾಗಿದ್ದಾರೆ. ಶುಕ್ರವಾರ ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,847 ಕೋವಿಡ್ ಸಾವು ಸಂಭವಿಸಿರುವುದಾಗಿ ಆರೋಗ್ಯ ಇಲಾಖೆ ಹೇಳಿದೆ.
ದಕ್ಷಿಣ ಕನ್ನಡದಲ್ಲಿ ಸಕ್ರಿಯ ಪ್ರಕರಣಗಳು ಎರಡಂಕೆಗಳಿಗೆ ಇಳಿದಿದೆ. ಶುಕ್ರವಾರ 38 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಪಾಸಿಟಿವಿಟಿ ದರ ಶೇ.0.08ರಲ್ಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!