Monday, August 15, 2022

Latest Posts

ದೆಹಲಿಯ ಒಂದೇ ಆಸ್ಪತ್ರೆಯ 80 ವೈದ್ಯರನ್ನು ಕಾಡುತ್ತಿದೆ ಕೊರೋನಾ ಸೋಂಕು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೆಹಲಿಯ ಕೋವಿಡ್ ಕೇರ್ ಸೆಂಟರ್ ಒಂದರ 80 ವೈದ್ಯರು ಕೊರೋನಾ ಸೋಂಕಿನಿಂದ ಬಳಲುತ್ತಿದ್ದರೆ.
ಇಲ್ಲಿನ ಸೂರಜ್ ಆಸ್ಪತ್ರೆಯ 80 ವೈದ್ಯರು ಸೋಂಕಿನಿಂದ ಬಳಲುತ್ತಿದ್ದು, ಅವರಲ್ಲಿ 12 ವೈದ್ಯರು ಅದೇ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಕೆಲವರು ಬೇರೆ ಆಸ್ಪತ್ರೆಗೆ ಶಿಫ್ಟ್ ಆಗಿದ್ದರೆ, ಉಳಿದವರು ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದಾರೆ.
80 ವೈದ್ಯರಲ್ಲಿ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಒಪಿಡಿ ಬಂದ್ ಮಾಡಲಾಗಿದೆ. ಎರಡು ದಿನಗಳ ಹಿಂದಷ್ಟೇ ಇದೇ ಆಸ್ಪತ್ರೆಯ ಹಿರಿಯ ಸರ್ಜನ್ ಮಹಾಮಾರಿಗೆ ಬಲಿಯಾಗಿದ್ದರು. ದೆಹಲಿಯಲ್ಲಿ ಸುಮಾರು 300 ವೈದ್ಯರು ಕೊರೋನಾ ಸೋಂಕಿನಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss