ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ದಿಗಂತ ವರದಿ ಮಡಿಕೇರಿ:
ಕೊಡಗು ವೈದ್ಯಕೀಯ ಕಾಲೇಜಿ(ಕಿಮ್ಸ್ )ನ ಸುಮಾರು 34 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಕಾಲೇಜಿನ ಡೀನ್ ಡಾ.ಕಾರ್ಯಪ್ಪ ಅವರು ಈ ವಿಷಯವನ್ನು ದೃಢಪಡಿಸಿದ್ದಾರೆ.
ವಾರದ ಹಿಂದೆ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿತ್ತು. ಆದ ಕಾರಣ ಎಲ್ಲಾ ವಿದ್ಯಾರ್ಥಿಗಳಿಗೆ ಸಾಮೂಹಿಕವಾಗಿ ತಪಾಸಣೆ ನಡೆಸಲಾಗಿದೆ. ಈ ಸಂದರ್ಭ 34 ವಿದ್ಯಾರ್ಥಿಗಳಲ್ಲಿ ಸೋಂಕು ಕಂಡು ಬಂದಿದೆ ಎಂದು ಅವರು ಹೇಳಿದ್ದಾರೆ.
ಪ್ರಾಥಮಿಕ ಸಂಪರ್ಕಿತ ಎಲ್ಲಾ ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಸೋಂಕಿತರಿಗೆ ಕಾಲೇಜಿನಲ್ಲಿಯೇ ಐಸೋಲೇಷನ್ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಸದ್ಯಕ್ಕೆ ಆನ್ಲೈನ್ ಮೂಲಕ ತರಗತಿ ತೆಗೆದುಕೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳೆಲ್ಲರೂ ಆರೋಗ್ಯವಾಗಿದ್ದಾರೆ. ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ ಎಂದು ಡಾ.ಕಾರ್ಯಪ್ಪ ತಿಳಿಸಿದ್ದಾರೆ.