ರಾಜ್ಯದಲ್ಲಿ ಇಂದು 2,372 ಮಂದಿಗೆ ಕೊರೋನಾ ಸೋಂಕು, ಪಾಸಿಟಿವಿಟಿ ದರ 2.31%

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಇಂದು 2,372 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, 27 ಜನ ಬಲಿಯಾಗಿದ್ದಾರೆ.
ಈ ಕುರಿತು ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದು, ಬೆಂಗಳೂರಿನಲ್ಲಿ 1,059 ಮಂದಿಗೆ ಸೇರಿ ರಾಜ್ಯದಲ್ಲಿ ಒಟ್ಟು 2,372 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇನ್ನು ರಾಜ್ಯದಲ್ಲಿ ಇಂದು ಪಾಸಿಟಿವಿಟಿ ದರ 2.31% ಕ್ಕೆ ತಲುಪಿದೆ ಎಂದಿದ್ದಾರೆ.
ಇನ್ನು 5,395 ಜನ ಸೋಂಕಿನಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ 35,697ಕ್ಕೆ ತಲುಪಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!