ಕಾಸರಗೋಡು ಜಿಲ್ಲೆಯಲ್ಲಿ ಭಾನುವಾರ 259 ಮಂದಿಗೆ ಕೊರೋನಾ ಸೋಂಕು

ಹೊಸದಿಗಂತ ವರದಿ,ಕಾಸರಗೋಡು:

ಜಿಲ್ಲೆಯಲ್ಲಿ ಭಾನುವಾರ 259 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 213 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 272 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಸಾವು ಸಂಭವಿಸಿಲ್ಲ.
ಕೇರಳದಲ್ಲಿ 11,136 ಹೊಸ ಪ್ರಕರಣ
ಕೇರಳದಲ್ಲಿ ಭಾನುವಾರ ಹೊಸದಾಗಿ 11,136 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 10,331 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 32,004 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 11 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಭಾನುವಾರ ಶೇಕಡಾ 18.43 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!