ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 262 ಮಂದಿಗೆ ಕೊರೋನಾ ಸೋಂಕು

ಹೊಸದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಕೋವಿಡ್ ವೈರಸ್ ಸೋಂಕು ಬಾಧಿತರ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ. ಅದರಂತೆ ಬುಧವಾರ 262 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 141 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 128 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಒಬ್ಬರು ಸಾವಿಗೀಡಾದರು.

ಕೇರಳದಲ್ಲಿ 12,742 ಹೊಸ ಪ್ರಕರಣ

ಕೇರಳದಲ್ಲಿ ಬುಧವಾರ ಹೊಸದಾಗಿ ಬರೋಬ್ಬರಿ 12,742 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 11,327 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 2552 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 23 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಮಂಗಳವಾರ ಶೇಕಡಾ 14.18 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!