ಕೊಡಗು ಜಿಲ್ಲೆಯಲ್ಲಿ 28 ಮಂದಿಗೆ ಕೊರೋನಾ ಸೋಂಕು

ಹೊಸದಿಗಂತ ವರದಿ, ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಸೋಮವಾರ 28ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಪಾಸಿಟಿವಿಟಿ ಪ್ರಮಾಣವೂ ಶೇ.8.95ಕ್ಕೆ ಏರಿಕೆಯಾಗಿದೆ.
ಸೋಮವಾರ, ಮಡಿಕೇರಿ ತಾಲೂಕಿನಲ್ಲಿ 3, ಸೋಮವಾರಪೇಟೆ ತಾಲೂಕಿನಲ್ಲಿ 12ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 13ಹೊಸ ಪ್ರಕರಣಗಳು ವರದಿಯಾಗಿವೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 47,539ರಷ್ಟಾಗಿದ್ದು, ಕಳೆದ 24ಗಂಟೆಗಳಲ್ಲಿ 83ಮಂದಿ ಗುಣಮುಖರಾಗುವುದರೊಂದಿಗೆ ಇದುವರೆಗೆ ಒಟ್ಟು 46,438 ಮಂದಿ ಸೋಂಕು ಮುಕ್ತರಾಗಿದ್ದಾರೆ. ಅಲ್ಲದೆ 449 ಮಂದಿ ಸಾವಿಗೀಡಾಗಿದ್ದಾರೆ.
ಜಿಲ್ಲೆಯಲ್ಲಿ ಪ್ರಸಕ್ತ 652 ಸಕ್ರಿಯ ಪ್ರಕರಣಗಳಿದ್ದು, ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 79 ಹಾಗೂ ಪಾಸಿಟಿವಿಟಿ ದರ ಶೇ.8.95ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!