ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 317 ಮಂದಿಗೆ ಕೊರೋನಾ ಸೋಂಕು

ಹೊಸದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಶನಿವಾರ 317 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 298 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 116 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಒಬ್ಬರು ಸಾವಿಗೀಡಾದರು.

ಕೇರಳದಲ್ಲಿ 17,755 ಹೊಸ ಪ್ರಕರಣ
ಕೇರಳದಲ್ಲಿ ಸೋಂಕು ಮತ್ತಷ್ಟು ಹೆಚ್ಚುತ್ತಿದ್ದು , ಶನಿವಾರ ಹೊಸದಾಗಿ 17,755 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 16,488 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 4694 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 24 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಶುಕ್ರವಾರ ಶೇಕಡಾ 23.69 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!