ಹೊಸದಿಗಂತ ವರದಿ,ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ (ಮಾ.03) 6 ಮಂದಿಗೆ ಕೊರೋನಾ ಸೋಂಕು ದೃಢ ಪಟ್ಟಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ. ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿ ಒಂದಂಕೆಯಲ್ಲಿ ಮುಂದುವರಿದಿದೆ.
ಇದೇ ವೇಳೆ 26 ಮಂದಿ ಗುರುವಾರ ಸೋಂಕು ಮುಕ್ತರಾಗಿದ್ದಾರೆ. ಈ ತನಕ ಜಿಲ್ಲೆಯಲ್ಲಿ 1,33,510 ಮಂದಿ ಕೋವಿಡ್ ಮುಕ್ತರಾಗಿದ್ದಾರೆ. ಗುರುವಾರ ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,847 ಕೋವಿಡ್ ಸಾವು ಸಂಭವಿಸಿರುವುದಾಗಿ ಆರೋಗ್ಯ ಇಲಾಖೆ ಹೇಳಿದೆ.
ದಕ್ಷಿಣ ಕನ್ನಡದಲ್ಲಿ ಸಕ್ರಿಯ ಪ್ರಕರಣಗಳು ಎರಡಂಕೆಗಳಿಗೆ ಇಳಿದಿದೆ. ಗುರುವಾರ 58 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಪಾಸಿಟಿವಿಟಿ ದರ ಶೇ.0.29ರಲ್ಲಿದೆ.