ಹೊಸದಿಗಂತ ವರದಿ, ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ (ಫೆ.26) 7 ಮಂದಿಗೆ ಕೊರೋನಾ ಸೋಂಕು ದೃಢ ಪಟ್ಟಿರುವುದಾಗಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಬಹಳ ದಿನಗಳ ಬಳಿಕ ಸೋಂಕಿತರ ಸಂಖ್ಯೆ ಸಿಂಗಲ್ ನಂಬರಿಗೆ ಬಂದಿದೆ.
ಇದೇ ವೇಳೆ 17 ಮಂದಿ ಶನಿವಾರ ಸೋಂಕು ಮುಕ್ತರಾಗಿದ್ದಾರೆ. ಈ ತನಕ ಜಿಲ್ಲೆಯಲ್ಲಿ 1,33,401 ಮಂದಿ ಕೋವಿಡ್ ಮುಕ್ತರಾಗಿದ್ದಾರೆ. ಶನಿವಾರ ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,845 ಕೋವಿಡ್ ಸಾವು ಸಂಭವಿಸಿರುವುದಾಗಿ ಆರೋಗ್ಯ ಇಲಾಖೆ ಹೇಳಿದೆ.
ದಕ್ಷಿಣ ಕನ್ನಡದಲ್ಲಿ 137 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ.0.20ಕ್ಕೆ ಇಳಿದಿದೆ.