ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ 714 ಮಂದಿಗೆ ಕೊರೋನಾ ಸೋಂಕು

ಹೊಸದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಗುರುವಾರ 714 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 656 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 1046 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಮೂರು ಮಂದಿ ಸಾವಿಗೀಡಾದರು.

ಕೇರಳದಲ್ಲಿ 42,677 ಹೊಸ ಪ್ರಕರಣ

ಕೇರಳದಲ್ಲಿ ಗುರುವಾರ ಹೊಸದಾಗಿ 42,677 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 39,118 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 50,821 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 36 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಗುರುವಾರ ಶೇಕಡಾ 37.23 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!