ಹೊಸದಿಗಂತ ವರದಿ, ಕಾಸರಗೋಡು:
ಜಿಲ್ಲೆಯಲ್ಲಿ ಗುರುವಾರ 73 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 62 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 31 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಇಬ್ಬರು ಸಾವಿಗೀಡಾದರು.
ಕೇರಳದಲ್ಲಿ 4649 ಹೊಸ ಪ್ರಕರಣ
ಕೇರಳದಲ್ಲಿ ಗುರುವಾರ ಹೊಸದಾಗಿ 4649 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 4281 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 2180 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 17 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಬುಧವಾರ ಶೇಕಡಾ 6.87 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.