Wednesday, August 10, 2022

Latest Posts

ರಾಜ್ಯದಲ್ಲಿ ಇಂದು 801 ಮಂದಿಗೆ ಕೊರೋನಾ ಸೋಂಕು, ಪಾಸಿಟಿವಿಟಿ ದರ 0.67%

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಇಂದು 801 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 29,60,931ಕ್ಕೆ ಏರಿಕೆಯಾಗಿದೆ.ಇಂದು 15 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,487ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಇಂದು 1142 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,06,746ಕ್ಕೆ ಏರಿಕೆಯಾಗಿದೆ. ಇನ್ನು16,672 ಸಕ್ರೀಯ ಪ್ರಕರಣಗಳಿವೆ.
ರಾಜ್ಯಾದ್ಯಂತ ಇಂದು 1,19,503 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 801 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.67ಕ್ಕೆ ಇಳಿದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss