ಹೊಸದಿಗಂತ ವರದಿ,ಬಳ್ಳಾರಿ:
ನಗರ ಸೇರಿದಂತೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನಿರುಮ್ಮಳಾಗಿದ್ದ ಜನರಲ್ಲಿ ಮತ್ತಷ್ಟು ಆತಂಕ ಸೃಷ್ಟಿಸಿದೆ. ದಿನಕ್ಕೆ ನೂರು ಜನರಿಗೆ ಸೋಂಕು ದೃಢಪಡುತ್ತಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ.
ಸೋಮವಾರ ಜಿಲ್ಲೆಯಲ್ಲಿ ಬರೋಬ್ಬರಿ 132 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಒಬ್ಬರು ಬಲಿಯಾಗಿದ್ದಾರೆ. ಬಳ್ಳಾರಿ ನಗರದಲ್ಲೇ 63 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ.
ಸಂಡೂರು ತಾಲೂಕಲ್ಲಿ 15, ಕೂಡ್ಲಿಗಿ ತಾಲೂಕಿನ 28 ಸೇರಿ ಒಟ್ಟು 132 ಜನರಿಗೆ ಸೋಂಕು ದೃಢಪಟ್ಟಿದೆ. ಭಾನುವಾರ ಅತಿ ಹೆಚ್ಚು ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲೇ 37 ಜನರಿಗೆ ಸೋಂಕು ಇರುವುದು ದೃಢಪಟ್ಟಿತ್ತು. ಇಲ್ಲಿವರೆಗೆ ಜಿಲ್ಲೆಯಲ್ಲಿ ಒಟ್ಟು 40,692 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಅದರಲ್ಲಿ 39,291 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಎರಂಡಿಕೆ ಸೀಮಿತವಾಗಿದ್ದ ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ ಸಾವಿರ ಸಮೀಪಕ್ಕೆ ಬಂದು ನಿಂತಿದೆ. ಇಲ್ಲಿವರೆಗೆ ಜಿಲ್ಲೆಯಲ್ಲಿ 604 ಜನರು ಸೋಂಕಿಗೆ ಬಲಿಯಾದಂತಾಗಿದೆ.