ಹೊಸದಿಗಂತ ವರದಿ, ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್ ಸೋಂಕಿತರ ಪತ್ತೆ ಸಂಖ್ಯೆ 500ರ ಗಡಿ ದಾಟಿದೆ.
ಮಂಗಳವಾರ ಜಿಲ್ಲೆಯಲ್ಲಿ 583 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.
94 ಮಂದಿ ಗುಣಮುಖರಾಗಿದ್ದಾರೆ. ಮಂಗಳವಾರ ಜಿಲ್ಲೆಯಲ್ಲಿ ಕೊರೋನಾದಿಂದ ಯಾವುದೇ ಸಾವು ಸಂಭವಿಸಿಲ್ಲ. ಪಾಸಿಟಿವಿಟಿ ದರ ಶೇ.5.73 ದಾಖಲಾಗಿದೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 118400ಕ್ಕೆ ಏರಿಕೆಯಾಗಿದೆ. ಈ ಪೈಕಿ 1872 ಸಕ್ರಿಯ ಪ್ರಕರಣಗಳು. 114823 ಮಂದಿ ಗುಣಮುಖರಾಗಿದ್ದಾರೆ. 1705 ಮಂದಿ ಮೃತಪಟ್ಟಿದ್ದಾರೆ.