Friday, September 29, 2023

Latest Posts

ಕೊಡಗು ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಕೆಯಾದರೂ ಪಾಸಿಟಿವಿಟಿ ಪ್ರಮಾಣ ಹೆಚ್ಚಳ

ಹೊಸದಿಗಂತ ವರದಿ, ಕೊಡಗು:

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಮುಖ ಕಂಡಿದ್ದರೂ, ಪಾಸಿಟಿವಿಟಿ ಪ್ರಮಾಣ ಮಾತ್ರ ಶೇ.113.86ಕ್ಕೆ ಏರಿಕೆಯಾಗಿದೆ.
ಸೋಮವಾರ ಸಂಜೆ 5ಗಂಟೆಗೆ ಕೊನೆಗೊಂಡಂತೆ ಕಳೆದ 24ಗಂಟೆಗಳಲ್ಲಿ‌ ಒಟ್ಟು 657 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಮಡಿಕೇರಿ ತಾಲೂಕಿನಲ್ಲಿ 223, ಸೋಮವಾರಪೇಟೆ ತಾಲೂಕಿನಲ್ಲಿ 245 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ189 ಹೊಸ ಪ್ರಕರಣಗಳು ವರದಿಯಾಗಿವೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 40,298ರಷ್ಟಾಗಿದ್ದು, ಕಳೆದ. 24ಗಂಟೆಗಳಲ್ಲಿ 481ಮಂದಿ ಗುಣಮುಖರಾಗಿದ್ದು, ಇದುವರೆಗೆ ಒಟ್ಟು 36,663 ಮಂದಿ ಸೋಂಕು ಮುಕ್ತರಾದಂತಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 439ಮಂದಿ ಸಾವಿಗೀಡಾಗಿದ್ದು, ಪ್ರಸಕ್ತ 3196 ಸಕ್ರಿಯ ಪ್ರಕರಣ ಹಾಗೂ 232 ಕಂಟೈನ್ ಮೆಂಟ್ ವಲಯಗಳಿವೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!