Wednesday, July 6, 2022

Latest Posts

18 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಾಂಕೇತಿಕ ಚಾಲನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………………………. 

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಲಸಿಕೆಗೆ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚು ದರ ತೆಗೆದುಕೊಂಡರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಇಂದು 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಮೂಲಕ ಸಿಎಂ ಚಾಲನೆ ನೀಡಿ, ಮಾತನಾಡಿದ್ದಾರೆ.

ನಮ್ಮ ಬಳಿ 1 ಲಕ್ಷ ಲಸಿಕೆ ಸಂಗ್ರಹವಿದೆ. ಕೇಂದ್ರದಿಂದ 3 ಲಕ್ಷ ಲಸಿಕೆ ಬಂದಿದ್ದು, ಒಟ್ಟು 4 ಲಕ್ಷ ಡೋಸ್ ಲಸಿಕೆಯಿದೆ. 18 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ನೀಡುವುದು ಕೋವಿಡ್ ವಿರುದ್ಧದ ಸಮರದಲ್ಲಿ ಮಹತ್ವದ ದಿನವಾಗಿದೆ. ಒಂದೆರಡು ದಿನಗಳಲ್ಲಿ ಇನ್ನಷ್ಟು ಲಸಿಕೆಗಳು ಪೂರೈಕೆಯಾಗಲಿದ್ದು, ಅಭಿಯಾನ ದೊಡ್ಡ ಪ್ರಮಾಣದಲ್ಲಿ ನಿರಂತರ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

ಖಾಸಗಿ ಆಸ್ಪತ್ರೆಯಲ್ಲಿ ಲಸಿಕೆಗೆ ದರ ನಿಗದಿ‌ ಮಾಡಲಾಗಿದೆ. ಕೋವಿಡ್​ಗೆ ಸಂಬಂಧಿಸಿದ ಔಷಧವನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡಿದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ಜನರು ಸರ್ಕಾರದ ಮಾರ್ಗ ಸೂಚಿ ಪಾಲಿಸಬೇಕು. ಜನರು ಸಹಕಾರ ನೀಡಿದರೆ ಮಾತ್ರ ಕೊರೋನಾ ನಿಯಂತ್ರಣ ಸಾಧ್ಯ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss