ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಟೀಂ ಇಂಡಿಯಾ ಕ್ರಿಕೆಟಿಗ ಯಜ್ವೇಂದ್ರ ಚಹಲ್ ಅವರ ತಾಯಿ ಮತ್ತು ತಂದೆ ಗೆ ಕೊರೋನಾ ದೃಢಪಟ್ಟಿದ್ದು, ಚಾಹಲ್ ಅವರ ಪತ್ನಿ ಧನಶ್ರೀ ವರ್ಮಾ ಈ ಮಾಹಿತಿಯನ್ನು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡುವ ಮೂಲಕ ನೀಡಿದ್ದಾರೆ.
ಯುಜ್ವೇಂದ್ರ ಚಾಹಲ್ ಅವರ ತಂದೆಯ ಸ್ಥಿತಿ ಚಿಂತಾಜನಕವಾಗಿದೆ. ತೀವ್ರ ರೋಗಲಕ್ಷಣಗಳಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನನ್ನ ಅತ್ತೆ ಪಾಸಿಟಿವ್ ಎಂದು ಕಂಡುಬಂದಿದೆ. ಇಬ್ಬರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಮಾವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ ಅತ್ತೆ ಮನೆಯಲ್ಲೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದಿದ್ದಾರೆ.
ಇದಕ್ಕೂ ಮೊದಲು ಧನಶ್ರೀ ಅವರ ತಾಯಿ ಮತ್ತು ಸಹೋದರ ಕೊರೋನಾ ಪಾಸಿಟಿವ್ ಆಗಿದ್ದರು. ಆ ಸಮಯದಲ್ಲಿ ಧನಶ್ರೀ ಐಪಿಎಲ್ನ ಬಯೋ ಬಬಲ್ನಲ್ಲಿದ್ದರು. ಆದರೆ, ಈಗ ಧನಶ್ರೀ ಅವರ ತಾಯಿ ಮತ್ತು ಸಹೋದರ ಚೇತರಿಸಿಕೊಂಡಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಧನಶ್ರೀ, ಇದು ತುಂಬಾ ಕಷ್ಟಕರ ಮತ್ತು ಸವಾಲಿನ ಸಂಗತಿಯಾಗಿದೆ. ನನ್ನ ತಾಯಿ ಮತ್ತು ಸಹೋದರ ಪಾಸಿಟಿವ್ ಆಗಿದ್ದರು. ಆದರೆ ನಾನು ಆ ಸಮಯದಲ್ಲಿ ಐಪಿಎಲ್ ಬಯೋ ಬಬಲ್ನಲ್ಲಿದ್ದೆ ಮತ್ತು ಅಸಹಾಯಕಳಾಗಿದ್ದೆ ಆದರೆ ಕಾಲಕಾಲಕ್ಕೆ ಅವರ ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದೆ. ಕುಟುಂಬದಿಂದ ದೂರವಿರುವುದು ತುಂಬಾ ಕಷ್ಟ. ಅವರು ಚೇತರಿಸಿಕೊಂಡಿರುವುದು ಒಳ್ಳೆಯದು ಎಂದಿದ್ದಾರೆ.
ಕೊರೊನಾಗೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ಚಿಕ್ಕಪ್ಪ ಮತ್ತು ಚಿಕ್ಕಮ್ಮ ಮೃತಪಟ್ಟಿದ್ದಾರೆ ಎಂದು ಧನಶ್ರೀ ಹೇಳಿದ್ದಾರೆ.