ಕೊರೋನಾ ನಿಯಂತ್ರಣಕ್ಕೆ ಬಿಗಿ ಕ್ರಮ ಅನಿವಾರ್ಯ: ಸಚಿವ ಎಸ್.ಟಿ.ಸೋಮಶೇಖರ್

ಹೊಸದಿಗಂತ ವರದಿ,ಮೈಸೂರು:

ರಾಜ್ಯದಲ್ಲಿ ಇತ್ತೀಚೆಗೆ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದನ್ನು ಮನಗಂಡ ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಕೆಲವೊಂದು ಬಿಗಿ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯವಾಗಿದೆ. ಹಾಗಾಗಿ ಸರ್ಕಾರದ ಕ್ರಮಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ವಾರಾಂತ್ಯ ಕರ್ಫೂ್ಯ ಹಿನ್ನೆಲೆಯಲ್ಲಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಕೋವಿಡ್ ನಿಯಂತ್ರಣಾ ಕ್ರಮಗಳನ್ನು ಚುರುಕುಗೊಳಿಸಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಈಗಾಗಲೇ ರಾತ್ರಿ ಕರ್ಫೂ್ಯ ಜಾರಿಗೊಳಿಸಲಾಗಿದ್ದು, ಜ.8 ಮತ್ತು 9ರಂದು ವಾರಾಂತ್ಯ ಕರ್ಫೂ್ಯ ಇರಲಿದೆ.
ವಾರಾಂತ್ಯ ಕರ್ಫೂ್ಯನಲ್ಲಿ ಅಗತ್ಯ ಸೇವೆಗಳಿಗೆ ಅವಕಾಶ ನೀಡಲಾಗಿದೆ. ಸರ್ಕಾರ ಹೊರಡಿಸಿರುವ ಕೋವಿಡ್ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.
ವಾರಾಂತ್ಯದ ಕರ್ಪೂ್ಯವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಪೊಲೀಸ್ ಇಲಾಖೆಯಿಂದ ಚೆಕ್ ಪೊಸ್ಟ್ ಗಳನ್ನು ಹಾಕಲಾಗಿದೆ. ಸಾರ್ವಜನಿಕರು ಅನಗತ್ಯವಾಗಿ ಸಂಚರಿಸಬಾರದು. ಪೊಲೀಸ್, ಅಧಿಕಾರಿಗಳೊಂದಿಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಕೋರಿದ್ದಾರೆ.
ಮೈಸೂರು ಜಿಲ್ಲೆಯಲ್ಲಿ ಎರಡನೇ ಡೋಸ್ ಲಸಿಕೆ ಹಾಕಿಸುವ ಪ್ರಮಾಣ ಶೇ.100ರಷ್ಟು ತಲುಪಬೇಕು. ರೋಗ ಲಕ್ಷಣಗಳು ಕಂಡುಬAದಾಕ್ಷಣ ಹೋಂ ಐಸೋಲೇಶನ್ ನಲ್ಲಿದ್ದು ಚಿಕಿತ್ಸೆ ಪಡೆದುಕೊಳ್ಳಬಹುದು ಅಥವಾ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಬಹುದು. ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪೂರೈಕೆ, ಹಾಸಿಗೆಗಳು, ವೆಂಟಿಲೇಟರ್ ಲಭ್ಯತೆ ಸೇರಿದಂತೆ ಕೋವಿಡ್ ರೋಗಿಗಳ ಚಿಕಿತ್ಸೆಗೆ ಬೇಕಿರುವ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಲಾಗಿದೆ. ಸಾರ್ವಜನಿಕರು ಆತಂಕಗೊಳ್ಳುವುದು ಬೇಡ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!