Wednesday, August 10, 2022

Latest Posts

ಹೆಚ್ಚು ಪ್ರಯಾಣದರ ವಸೂಲಿ ಮಾಡುವ ಬಸ್‌ಗಳ ವಿರುದ್ಧ ಸೂಕ್ತ ಕ್ರಮ: ಸಾರಿಗೆ ಪ್ರಾಧಿಕಾರ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………

ಹೊಸದಿಗಂತ ವರದಿ,ಮಂಗಳೂರು:

ನಗರದಲ್ಲಿ ಕೆಲವು ಖಾಸಗಿ ಬಸ್‌ಗಳು ಪ್ರಯಾಣಿಕರಿಂದ ಹೆಚ್ಚಿನ ಟಿಕೆಟ್ ದರ ವಸೂಲಿ ಮಾಡುತ್ತಿರುವ ದೂರುಗಳು ನಿತ್ಯ ಕೇಳಿ ಬರುತ್ತಲೇ ಇವೆ. ಸಿಟಿ ಬಸ್‌ಗಳು ಬಸ್‌ಗಳು ತಮ್ಮಷ್ಟಕ್ಕೆ ಪ್ರಯಾಣ ದರ ಏರಿಸಿಕೊಂಡಿರುವ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಬಸ್ ದರ ಏರಿಕೆ ಮಾಡಿದ ಬಸ್‌ಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗಿದೆ.
ಮೋಟಾರು ವಾಹನ ಕಾಯ್ದೆ ಹಾಗೂ ರಾಜ್ಯ ಸರ್ಕಾರದ ಅಧಿ ಸೂಚನೆಯ ಪ್ರಕಾರ ನಗರ ಮತ್ತು ಗ್ರಾಮಾಂತರ ಪ್ರಯಾಣ ದರವನ್ನು ನಿಗದಿಪಡಿಸಲು ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳಿಗೆ ಅಧಿಕಾರ ನೀಡಲಾಗಿದೆ. ಕೋವಿಡ್-19  ಅವಧಿಯಲ್ಲಿ ದಕ್ಷಿಣ ಕನ್ನಡ ಸಾರಿಗೆ ಪ್ರಾಧಿಕಾರವು ನಗರ ಮತ್ತು ಗ್ರಾಮಾಂತರ ಪ್ರಯಾಣ ದರ ಏರಿಕೆ ಮಾಡಿರುವುದಿಲ್ಲ. ಖಾಸಗಿ ಬಸ್ ಮಾಲೀಕರು ಹೆಚ್ಚುವರಿ ದರ ಪಡೆದಲ್ಲಿ ಬಸ್ಸಿನ ನೋಂದಣಿ ಸಂಖ್ಯೆ ಹಾಗೂ ರೂಟ್ ಮಾಹಿತಿಯನ್ನು ಲಿಖಿತ ಪುರಾವೆಯೊಂದಿಗೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಕಚೇರಿಗೆ ಸಲ್ಲಿಸಬೇಕು. ಅಂತಹ ವಾಹನಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss