ಭ್ರಷ್ಟ ಸಿದ್ದರಾಮಯ್ಯನವರೇ ನೀವ್ಯಾಕೆ ರಾಜೀನಾಮೆ ಕೊಡಬೇಕು ಗೊತ್ತೇ?? ಶುರುವಾಯ್ತು ಟ್ವೀಟ್ ವಾರ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಿದ್ದು, ಪ್ರತಿಪಕ್ಷಗಳು ಸಿಎಂ ರಾಜೀನಾಮೆಗೆ ಪಟ್ಟು ಹಿಡಿದಿವೆ.

ಮುಡಾ ಹಗರಣ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ವಿಶೇಷ ಜನಪ್ರತಿನಿಧಿ ನ್ಯಾಯಾಲಯ ಆದೇಶಿಸಿದೆ. ಸಿದ್ದರಾಮಯ್ಯ ಶೀಘ್ರವೇ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮತ್ತು ಜೆಡಿಎಸ್ ಪಟ್ಟು ಹಿಡಿದಿವೆ.

ಮಿಸ್ಟ‌ರ್ ಸಿದ್ದಣ್ಣ ಅವರೇ…. ಅಂದು ನೀವೇ ಆಡಿದ್ದ ಮಾತಿಗೆ ಇಂದು ಬದ್ಧರಾಗಿ ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆಗೆ ನ್ಯಾಯಾಲಯ ಆದೇಶಿಸಿದೆ.. ಲೋಕಾಯುಕ್ತ ಪೊಲೀಸರು ತನಿಖೆ ನಡೆಸಬೇಕು. ಈಗ ರಾಜ್ಯದ ಮುಖ್ಯಮಂತ್ರಿ ನೀವೇ ಆಗಿದ್ದೀರಿ.. ಎಲ್ಲಾ ತನಿಖಾ ಸಂಸ್ಥೆಗಳು ನಿಮ್ಮ ಅಧೀನದಲ್ಲೇ ಇವೆ. ಗೃಹ ಇಲಾಖೆ ಮತ್ತು ಪೊಲೀಸರು ನಿಮ್ಮ ಅಡಿಯಲ್ಲಿ ಕೆಲಸ ಮಾಡುತ್ತಾರೆ. ನೀವು ಮುಖ್ಯಮಂತ್ರಿ ಹುದ್ದೆಯಲ್ಲೇ ಇದ್ದರೇ ನ್ಯಾಯಸಮ್ಮತ ತನಿಖೆ ಸಾಧ್ಯವೇ..? ಸಿಎಂ ಆಗಿ ಮುಂದುವರಿಯುವ ಅರ್ಹತೆ ನಿಮಗಿಲ್ಲ.. ರಾಜೀನಾಮೆ ಕೊಟ್ಟು ತನಿಖೆ ಎದುರಿಸಿ ಎಂದು ಜೆಡಿಎಸ್ ಟ್ವೀಟ್ ಮಾಡಿದೆ.

ಸಿಎಂ @siddaramaiah ಅವರೆ, ನಾನ್ಯಾಕೆ ರಾಜೀನಾಮೆ ಕೊಡಬೇಕು ಎನ್ನುವ ನಿಮ್ಮ ಭಂಡತನಕ್ಕೆ ಹೈಕೋರ್ಟ್‌ ಸ್ಪಷ್ಟ ಉತ್ತರ ನೀಡಿದೆ. ಹೈಕೋರ್ಟ್‌ ತೀರ್ಪನ್ನು ಗೌರವಿಸಿ ಮೊದಲು ರಾಜೀನಾಮೆ ನೀಡಿ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here